ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ
ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.
ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು
ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.