ಕಳ್ಳತನಕ್ಕೆ ಯತ್ನ ಪ್ರಕರಣದಲ್ಲಿ ಕುಖ್ಯಾತ ಕಳ್ಳನ ಬಂಧನ
ಕಾರ್ಕಳ: ತಾಲೂಕಿನ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಜ.16 ರಂದು ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಿಟ್ಟೆ ಗ್ರಾಮದ ಸುರೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.
ಜ.16ರಂದು ಈತ ಸೊಸೈಟಿ ಬೀಗ ಮುರಿದು ಒಳಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 04/2026 ಕಲಂ 331(2). 305, 62 ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ರವರ, ಸಿ.ಪಿ.ಐ ಕಾರ್ಕಳರವರಾದ ಮಂಜಪ್ಪ ರವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಎಂ.ಎಸ್, ಪಿಎಸ್‌ಐ ಸುಂದರ, ಎಎಸ್‌ಐ ಪ್ರಕಾಶ, ಎಎಸ್‌ಐ ಸುಂದರ ಗೌಡ, ಹೆಚ್.ಸಿ. ರುದ್ರೇಶ್, ಹೆಚ್.ಸಿ. ಚಂದ್ರಶೇಖರ್, ಪಿಸಿ ಸಂತೋಷ್, ಮಾಂತೇಶ್ ಮತ್ತು ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿಯಾದ ದಿನೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


















