HomeFresh NewsNRIಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶ್ಲಾಘನೆ

NRIಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶ್ಲಾಘನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಅಂತವರಿಗೆ ಈ ಅವಕಾಶ ಉತ್ತಮವಾಗಿದೆ ಎಂದು ಶಾಸಕರು ಶ್ಲಾಘನೆ ವ್ಯಕ್ತಪಡಿಸಿದರು. ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾದ ಸಿಎ ಶಾಂತಾರಾಮ್ ಶೆಟ್ಟಿ, ರೆಡ್ ಕ್ರಾಸ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments