HomeUncategorizedಕಾಪು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ: ಅಧಿಕಾರಿಗಳೊಂದಿಗೆ ಸಭೆ

ಕಾಪು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ: ಅಧಿಕಾರಿಗಳೊಂದಿಗೆ ಸಭೆ

ಕಾಪು ಪುರಸಭಾ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿದ್ದು ಈ ಸಂಬಂಧ ಇಂದು ದಿನಾಂಕ 26-05-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿ (RTO) ಹಾಗೂ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಶೀಘ್ರವೇ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸುವಂತೆ ಮತ್ತು ಬೀದಿ ದೀಪ ಮತ್ತು ಚರಂಡಿಗಳ ದುರಸ್ತಿಗೊಳಿಸುವಂತೆ ಸಂಭಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ ಕಾಪು ಪುರಸಭೆಯ ಸದಸ್ಯರು, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಸಂತೋಷ ಶೆಟ್ಟಿ, ಕಾಪು ಪೋಲಿಸ್ ಉಪ ನಿರೀಕ್ಷಕರಾದ ತೇಜಸ್ವಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ವಿಘ್ನೇಶ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments