ಪಡುಬಿದ್ರಿ: ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವು ಅಕ್ಟೋಬರ್ 2 ಮತ್ತು 3ರಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಸಾಹಿತಿ ಹಾಗೂ ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ, ಪಡುಬಿದ್ರಿ ಅವರಿಗೆ ಸೆಪ್ಟೆಂಬರ್ 17ರಂದು ಅವರ ನಿವಾಸ ‘ಉಲ್ಲಾಯೆ’ಯಲ್ಲಿ ಸಮ್ಮೇಳನದ ಅಧಿಕೃತ ಆಹ್ವಾನವನ್ನು ನೀಡಿ ಆಹ್ವಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ದೇವದಾಸ್ ಹೆಬ್ಬಾರ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಶಿವರ್, ಗೌರವ ಕಾರ್ಯದರ್ಶಿ ಅಶ್ವಿನಿ ಲಾರೆನ್ಸ್, ಜಿಲ್ಲಾ ಕ.ಸಾ.ಪ. ಮಾಧ್ಯಮ ಪ್ರತಿನಿಧಿ ನರಸಿಂಹ ಮೂರ್ತಿ ಮಣಿಪಾಲ, ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಜೂರು, ಕಸಾಪ ಕಾಪು ಸಹಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸದಸ್ಯ ಬೆಳ್ಳಿ ಭಾಸ್ಕರ್ ಕಾಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಾ. ವೈ.ಎನ್. ಶೆಟ್ಟಿ ಅವರ ಧರ್ಮಪತ್ನಿ ಕಲ್ಪನಾ ಹಾಗೂ ಮಗಳು ಶ್ವೇಚ್ಛಾ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ವತಿಯಿಂದ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ ನೀಡಿ, ಸಮ್ಮೇಳನದಲ್ಲಿ ಭಾಗವಹಿಸುವಂತೆ ಆತ್ಮೀಯವಾಗಿ ಆಹ್ವಾನಿಸಲಾಯಿತು.


