HomeFresh Newsಸ್ಪರ್ಧಾತ್ಮಕ ಪರೀಕ್ಷೆಗೆ ಒಲಂಪಿಯಾಡ್ ಸಹಕಾರಿ ಶ್ರೀಮತಿ ಮಮತ ಶೆಟ್ಟಿ

ಸ್ಪರ್ಧಾತ್ಮಕ ಪರೀಕ್ಷೆಗೆ ಒಲಂಪಿಯಾಡ್ ಸಹಕಾರಿ ಶ್ರೀಮತಿ ಮಮತ ಶೆಟ್ಟಿ


ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಂಪಿಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕಿನ ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕಿನ ವ್ಯಾಪ್ತಿಯಲ್ಲಿ ಒಲಂಪಿಯಾಡ್ 6.0 ಪರೀಕ್ಷೆ ಬರೆದು ಉತ್ತೀರ್ಣರಾದ ಒಟ್ಟೂ 219 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೆಯನ್ನು ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು ಸಾಮಾನ್ಯವಾಗಿದೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಅಗತ್ಯವಿರುತ್ತದೆ. ಗಾಮಾಭಿವೃದ್ಧಿ ಯೋಜನೆಯ CSC ಕೇಂದ್ರಗಳ ಮೂಲಕ 3 ರಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಒಲಂಪಿಯಾಡ್ ಪರೀಕ್ಷೆಗೆ ನೋಂದಾವಣೆ ಮಾಡಿಸಿ ಆನ್ಲೈನ್ ಮೂಲಕ ಪರೀಕ್ಷೆ ಬರೆದು ಸರ್ಟಿಫಿಕೇಟ್ ಪಡೆಯಬಹುದು ಹಾಗೂ ಅತೀ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳು ಸ್ಕಾಲರ್ಶಿಪ್‌ಗಳನ್ನು ಪಡೆಯಬಹುದಾಗಿದೆ.

ಒಲಂಪಿಯಾಡ್ ಕಾರ್ಯಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತಡರಹಿತ ವಾತಾವರಣ ರೂಪಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಹಕಾರಿಯಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮದ ಮೂಲಭೂತ ತಿಳುವಳಿಕೆ ಪಡೆಯಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಿ. ಎಸ್. ಸಿ ತಾಲೂಕಾ ನೋಡೆಲ್ ಅಧಿಕಾರಿಗಳಾದ ಶಿವಾನಂದ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments