ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ : ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ(ರಿ) ವತಿಯಿಂದ ನಡೆದ ಉಚಿತ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್‍ನ್ನು ಅಪ್ಡೇಟ್ ಮಾಡಿ ಅಬಾ ಕಾರ್ಡ್ ಪಡೆಯುವ ಕಾರ್ಯಕ್ರಮವು ಅತ್ಯಧಿಕ ಪಲಾನುಭವಿಗಳ ಸೇರುವಿಕೆಯಿಂದ ಬಹಳ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ನಡೆಸಿಕೊಡಲು ಅನುವು ಮಾಡಿಕೊಟ್ಟ ಜಿಲ್ಲಾಡಳಿತಕ್ಕೆ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಪಚ್ಚನಾಡಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಪಚ್ಚನಾಡಿ ವತಿಯಿಂದ ಕೃತಜ್ಞತೆಯನ್ನು ತಿಳಿಸಿದ್ದಾರೆ.
