ಪದವು ದೇವಸ್ಥಾನದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಶಿಬಿರ ಉದ್ಘಾಟಿಸಿ ಮಾತನಾಡಿ ಆರೋಗ್ಯ ಮನುಷ್ಯನ ಪ್ರಮುಖ ಸಂಪತ್ತು.

ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ನಿರಂತರ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಜನತೆ ಇದರ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯಪೂರ್ಣ ಜೀವನ ನಡೆಸಬೇಕಾಗಿದೆ ಎಂದರು. ಚೆನ್ನೈತ್ತೋಡಿ ಗ್ರಾಮ ಪಂಚಾಯತು ಅಧ್ಯಕ್ಷೆ ಭಾರತಿ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಮಚ್ಚಿನ ಸರಕಾರಿ ಪ್ರೌಢಶಾಲೆ ಶಿಕ್ಷಕ ವಿ.ಚಂದಪ್ಪ ಪೂಜಾರಿ, ಇರ್ವತ್ತೂರು ಗ್ರಾಮ ಪಂಚಾಯತು ಸದಸ್ಯೆ ಕಲ್ಯಾಣಿ, ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್., ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಬಂಗೇರಾ ಕಲ್ಲುಕೊಡಂಗೆ, ಸದಸ್ಯ ದೇವಿಪ್ರಸಾದ್ ಶೆಟ್ಟಿ ಪಾಲೆದಮರ, ಡಾ. ಶ್ರೀಲೇಖಾ, ಡಾ.ನಿಕಿತಾ ಶೆಟ್ಟಿ, ಡಾ.ವೃಂದ, ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಅಧ್ಯಕ್ಷ ರಮೇಶ್ ನಾಯ್ಕ್ ಕೈಮಾರು, ಕಾರ್ಯದರ್ಶಿ ಸುರೇಶ್ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು.

ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಅಸ್ಪತ್ರೆ ದೇರಳಕಟ್ಟೆ ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಅಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಹಾಗೂ ಎ.ಜೆ.ದಂತ ವೈದ್ಯಕೀಯ ಅಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಗಿತ್ತು. ನಿಶ್ಚಿತ್ ಶೆಟ್ಟಿ ಇರ್ವತ್ತೂರು ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.