ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ ಮಾಡಿದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.



ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ನರೇಶ್ಚಂದ್ ಹೆಗ್ಡೆ ಅವರು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರಮುಖರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ, ಸ್ಪರ್ಧೆಯ ಉದ್ದೇಶವನ್ನು ತಿಳಿಸಿ ಅಗತ್ಯವಾದ ಸಲಹೆ ಸೂಚನೆಗಳನ್ನು ಪಡೆದರು.
ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಶಿಕ್ಷಕರೂ, ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರೂ, ಸೇವಾ ಮನೋಭಾವನೆಯ ವೈದ್ಯರು, ಮಾನವೀಯ ಮುಖವುಳ್ಳ ತರುಣರೂ ಆದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದಾರೆ.ಕರಾವಳಿ, ಮಲೆನಾಡು ಮತ್ತು ಬಯಲು ಸೀಮೆ ಈ ಮೂರು ರೀತಿಯ ಭೌಗೋಳಿಕ ಲಕ್ಷಣಗಳನ್ನು ಹೊಂದಿದ ವಿಶಿಷ್ಠವಾದ ನೈಋತ್ಯ ಶಿಕ್ಷಕರ ಕ್ಷೇತ್ರವು ಅತ್ಯುನ್ನತ ಶೈಕ್ಷಣಿಕ ಗುಣಮಟ್ಟದ ನೂರಾರು ವಿದ್ಯಾಸಂಸ್ಥೆಗಳನ್ನು ಹೊಂದಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಹಾಗೂ ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕುಗಳು ಈ ಮತಕ್ಷೇತ್ರದ ವ್ಯಾಪ್ತಿಗೊಳಪಡುತ್ತವೆ.
ಈ ನಿಟ್ಟಿನಲ್ಲಿ ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಯೋಗ್ಯ ಹಾಗೂ ಸಮರ್ಥ ಶಿಕ್ಷಕರೋರ್‍ವರೇ ಆಯ್ಕೆಯಾಗಬೇಕೆನ್ನುವುದು ಈ ಕ್ಷೇತ್ರದಿಂದ ಶಿಕ್ಷಕ ಮತದಾರರ ಪ್ರಮಾಣಿಕ ಕಳಕಳಿಯಾಗಿದೆ.ಡಾ, ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕರಾವಳಿಯ ಪ್ರತಿಷ್ಠಿತ ಮನೆತನಗಳಲ್ಲೊಂದಾದ ಹೆಬ್ರಿಬೀಡು ಮನೆತನದಲ್ಲಿ ಹುಟ್ಟಿದವರು. ಡಾ. ನರೇಶ್ಚಂದ್ ಹೆಗ್ಡೆಯವರು ಹೃದ್ರೋಗ ಮತ್ತು ತತ್ಸಂಬಂಧೀ ವಿಷಯಗಳ ಒಟ್ಟು ಇಪ್ಪತ್ತು ವಿಧದ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕೈಗೊಂಡು ಬಹುದೊಡ್ಡ ಸಂಖ್ಯೆಯ ರೋಗಿಗಳಿಗೆ ಜೀವದಾನ ಮಾಡಿದವರು.
ಅನೇಕ ಸಂಶೋಧನಾತ್ಮಕ ಹೃದ್ರೋಗ ಸಂಬಂಧೀ ಪ್ರಬಂಧಗಳನ್ನು ರಾಷ್ಟ್ರೀಯ-ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಂಡಿಸಿದವರು. ಐವತ್ತಕ್ಕೂ ಹೆಚ್ಚಿನ ವೈದ್ಯಕೀಯ ಸಮ್ಮೆಳನಗಳು ಮತ್ತು ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು.ಬಿಎಸ್ಸಿ ಮತ್ತು ಎಂ.ಎಸ್ಸಿ ಕೋರ್ಸುಗಳಿಗೆ ಸಂಪೂರ್ಣ ಪಠ್ಯಕ್ರಮ ಮತ್ತು ಶಿಷ್ಟಾಚಾರ ನಿಯಮಗಳನ್ನು ರಚಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬಾರಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಈ ಬಾರಿ ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಗೆ ಪಕ್ಷೇತತರಾಗಿ ಸ್ಪರ್ಧಿಸುತ್ತಿದ್ದಾರೆ.