HomeFresh Newsಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ.

ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ಸ್ ಮೂಲಗಳು ತಿಳಿಸಿದೆ. ಬೈಕ್ ಸವಾರರು ಗಾಯಗೊಂಡಿದ್ದು ಅವರು ಕೂಡ ಉಡುಪಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ.
ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments