ಪಡುಬಿದ್ರಿಯಲ್ಲಿ ಪುಟಾಣಿಗಳಿಗೆ ವೇಷ ಹಾಕಿ ಭಿಕ್ಷಾಟನೆ

ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ ಕಂಡು ಬಂದಿದೆ.

ಗರ್ಭಿಣಿ ಮಹಿಳೆ ತನ್ನ ಪುಟ್ಟ ಎರಡು ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡಿ ಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರೋರ್ವರು ಆ ಮಹಿಳೆಯೊಂದಿಗೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೂ ನಡೆದಿದೆ. ಏನೂ ತಿಳಿಯದ ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಸಂಚಲನವನ್ನೇ ಎಬ್ಬೆಸಿದೆ.
