ಪಡುಬಿದ್ರಿ: ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ: ಗುಲಾಂ ಮೊಹಮ್ಮದ್

ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ.

ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗುಲಾಂ ಮೊಹಮ್ಮದ್ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

add - Haeir

Related Posts

Leave a Reply

Your email address will not be published.