ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಜಲ್ ಜೀವನ್ ಯೋಜನೆಯ ಪೈಪ್ ಲೈನ್ ಕಾಮಗಾರಿ
ಜನರ ನೀರಿನ ಬವಣೆ ತೀರಿಸಲೆಂದು ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ನಡೆಯುತ್ತಿರುವ “ಜಲ್ ಜೀವನ್” ಯೋಜನೆಯ ಪೈಪ್ ಲೈನ್ ಕಾಮಗಾರಿ ಜನರ ಜೀವ ತೆಗೆಯುತ್ತಾ ಎಂಬ ಮಾತು ಕೇಳಿ ಬರುತ್ತಿದೆ.
ಬಹುತೇಕ ಕಡೆಗಳಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರನ ನಿರ್ಲಕ್ಷ್ಯ ದಿಂದಾಗಿ ಅಲ್ಲಲ್ಲಿ ಪೈಪ್ ಲೈನ್‌ಗಾಗಿ ರಸ್ತೆಗಳನ್ನು ಅಗೆದು ಹಾಕಿ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗುತ್ತಿರುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಬೇಕಾಗಿದ್ದ ಜಿ.ಪಂ. ಇಂಜಿನಿಯರಿಂಗ್ ವಿಭಾಗ ವೀಕ್ ಆಗಿರುವುದೇ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕಾರಣ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.