ಪಡುಬಿದ್ರಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.
ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ ಸುಮಾರಿಗೆ ಪಕ್ಕದ ಮನೆಯ ಅಂಗಳದಲ್ಲಿ ನಡೆದು ಹೋಗುವುದನ್ನು ಆ ಮನೆ ಮಂದಿ ನೋಡಿದ್ದರು. ಅಲ್ಲಿಂದ ಮುಂದೆ ಹೋದವರು ಕತ್ತಲಲ್ಲಿ ಗಮನಿಸದೆ ಕೆಸರು ತುಂಬಿದ್ದ ನೀರಿನ ಹಳ್ಳಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿರ ಬಹುದೆಂಬುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
