HomeFresh Newsಪಡುಬಿದ್ರಿ:ರಸ್ತೆ ಸುರಕ್ಷತಾ ಸಮಿತಿ ಸಭೆ

ಪಡುಬಿದ್ರಿ:ರಸ್ತೆ ಸುರಕ್ಷತಾ ಸಮಿತಿ ಸಭೆ

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೋಟ, ಪಡುಬಿದ್ರಿ, ತೆಕ್ಕಟ್ಟೆ ಮುಂತಾದ ಸ್ಥಳಗಳಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇಂದು ದಿನಾಂಕ 30-10-2026 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸಭೆಯಲ್ಲಿ ಶಾಸಕರು ಮಾತನಾಡಿ ಹೈವೇ ರಸ್ತೆಯಲ್ಲಿ ಕಡ್ಡಾಯವಾಗಿ ರಿಫ್ಲೆಕ್ಟರ್ ಅಳವಡಿಸುವ ಬಗ್ಗೆ ಮತ್ತು ಹೈವೇಯಲ್ಲಿ ಸೂಚನಾ ಫಲಕ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಕೆಲವು ಕಡೆ ದೊಡ್ಡ ಗಾತ್ರದ ಹೊಂಡಗಳಿದ್ದು ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ದಾರಿದೀಪ ಡಿವೈಡರ್ ಹಲೋಜಿನ್ ಲೈಟ್ ಗಳನ್ನು ತುರ್ತು ಸರಿಪಡಿಸುವಂತೆ ಮತ್ತು ಪಡುಬಿದ್ರಿ ಜಂಕ್ಷನ್ ಬಳಿ ಅಪಘಾತ ತಡೆಯಲು ಮುಂಜಾಗ್ರತಾ ಕ್ರಮ ಮತ್ತು ಸುಗಮ ಸಂಚಾರಕ್ಕೆ (Traffic Jam) ತಡೆಯಲು ಕಡ್ಡಾಯವಾಗಿ ಪೋಲೀಸ್ ಅಳವಡಿಸುವಂತೆ ತಿಳಿಸಿ ಎರ್ಮಾಳು ಸ್ಕೈ ವಾಕ್ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ರುದ್ರನ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments