ಪಡುಬಿದ್ರಿ: ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ: ಸ್ಕೂಟರ್ ಬಿಟ್ಟು ಪಲಾಯಣ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೋಯ್ಯದಿದ್ದಾರೆ.

ಹೆದ್ದಾರಿ ಪಕ್ಕದ ಬಾಡಿಗೆ ರೂಮ್‌ನಲ್ಲಿ ಹಾವೇರಿ ಮೂಲದ ಮಾಸಪ್ಪ ಎಂಬವರ ಕುಟುಂಬ ವಾಸವಾಗಿದ್ದು, ದಸರಾ ಹಬ್ಬಕ್ಕಾಗಿ ಕಳೆದ ಹದಿನೈದು ದಿನಗಳ ಹಿಂದೆ ರೂಮ್‌ಗೆ ಬೀಗ ಹಾಕಿ ಊರಿಗೆ ಹೋಗಿದ್ದು, ಭಾನುವಾರ ಮುಂಜಾನೆ ೫-೩೦ರ ಸುಮಾರಿಗೆ ರೂಮ್ ಕಡೆಗೆ ಬಂದಾಗ ಮಂದ ಬೆಳಕಿನಲ್ಲಿ ಮನೆಮಂದೆ ವ್ಯಕ್ತಿಯೊಬ್ಬರು ನಿಂತಿದ್ದು ಇವರನ್ನು ಕಂಡು ತಾನು ತಂದಿದ್ದ ಸ್ಕೂಟರ್ ಬಿಟ್ಟು ಪಲಾಯನ ಮಾಡಿದ್ದಾನೆ. ರೂಮ್‌ನ ಬಾಗಿಲು ತೆರೆದುಕೊಂಡಿದ್ದು ಒಳಗೆ ಹೋಗಿ ಪರಿಶೀಲನೆ ನಡೆಸಿದಾಗ ಸಣ್ಣ ಪುಟ್ಟ ಮಕ್ಕಳ ಆಭರಣ ಸಹಿತ ಇಪ್ಪತ್ತು ಸಾವಿರ ನಗದು, ಹೊಸ ಪಾತ್ರೆಗಳು ಸುಮಾರು ಅರವತ್ತು ಕೆ.ಜಿಯಷ್ಟಿದ್ದ ಅಕ್ಕಿ ನಾಪತ್ತೆಯಾಗಿತ್ತು. ಈ ಬಗ್ಗೆ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಠಾಣಾ ಕ್ರೈಂ ಎಸ್ಸೈ ಪ್ರಕಾಶ್ ತಂಡ ಪರಿಶೀಲನೆ ನಡೆಸಿದಾಗ ಮತ್ತೆರಡು ಮನೆಗಳಲ್ಲಿ ಕಳವು ನಡೆಸಲು ಯತ್ನಿಸಿದ ಬಗ್ಗೆ ಮಾಹಿತಿ ದೊರಕಿದೆ. ಸ್ಥಳಕ್ಕೆ  ಕಾಪು ವೃತ್ತ ನಿರೀಕ್ಷಕ ಪೂವಯ್ಯ ಕೆ.ಸಿ. ಆಗಮಿಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಕಾರ್ಯಚರಿಸಿದ್ದು ಮಹತ್ವದ ಸುಳಿವು ಲಭ್ಯವಾಗಿದೆ ಎನ್ನಲಾಗಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.