ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ.

ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ ಯಶೋಧರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಕಣ್ಣಂಗಾರು ಇದರ ಅಧ್ಯಕ್ಷರಾದ ಶೀನ ಪೂಜಾರಿ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಬೆಂಗಳೂರಿನ ಯುವ ಉದ್ಯಮಿ ಗಣೇಶ್ ಗುಜರನ್, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ಭಾಗವಹಿಸಲಿದ್ದಾರೆ ಎಂದು ಯುವವಾಹಿನಿ ಪಡುಬಿದ್ರಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
