HomeFresh Newsಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ - ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯ ಉದ್ಘಾಟನೆ

ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯ ಉದ್ಘಾಟನೆ

ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಶಿಪ್ರಭಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಕಂದಾಯ ನಿರೀಕ್ಷಕರಾದ ಶಭೀರ್ ಹಾಗೂ ಮಜೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments