HomeFresh Newsಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.

ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ.ಮದ್ಯಾಹ್ನ ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ.

ಕೊಣಾಜೆ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments