ಪಣಂಬೂರು ಬೀಚ್ ಅಭಿವೃದ್ಧಿಗೆ ಅನುದಾನ ಬಿಡುಗಡೆ : ಶಾಸಕ ಡಾ. ವೈ ಭರತ್ ಶೆಟ್ಟಿ

ಪಣಂಬೂರು : ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು.

ಸೋಮವಾರ ಸಂಜೆ 7.5 ಕೋಟಿ ರೂ.ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರು ಉತ್ತರ ಕ್ಷೇತ್ರವು ದೊಡ್ಡದಾದ ಬೀಚ್ ಅನ್ನು ಹೊಂದಿದೆ. ಪಣಂಬೂರು ಬೀಚ್ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕಿದೆ. ಈ ಹಿಂದೆ ಸರಕಾರಕ್ಕೆ 10 ಸಾವಿರ ರೂ.ಗಳ ಕನಿಷ್ಠ ಆದಾಯ ಬರುತ್ತಿತ್ತು.ಇದೀಗ ಹೊಸ ಮಾದರಿಯ ಒಪ್ಪಂದದಲ್ಲಿ ಗರಿಷ್ಠ 10 ಲಕ್ಷ ರೂ.ಗಳು ಸರಕಾರಕ್ಕೆ ಪ್ರತೀ ತಿಂಗಳು ಆದಾಯ ಸಿಗಲಿದೆ.ಜತೆಗೆ ಪ್ರವಾಸಿಗರಿಗೆ ಎಲ್ಲಾ ಸೌಲಭ್ಯ ಸಿಗಲಿದೆ ಎಂದರು.

panamboor beach

ಎಲ್‍ಆರ್ ಎಸ್ ಬೀಚ್ ಟೂರಿಸಂ ಪಣಂಬೂರು ಸಂಸ್ಥೆಯ ಪಾಲುದಾರರಾದ ಲಕ್ಷ್ಮೀಶ್ ಭಂಡಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಂಣಂಬೂರು ಬೀಚ್‍ನಲ್ಲಿ ಸಕಲ ಸೌಲಭ್ಯ ಒದಗಿಸುವ ಸಲುವಾಗಿ ನೀಲಿ ನಕಾಶೆ ರೂಪಿಸಲಾಗಿದೆ. ಮನರಂಜನೆ, ಸಾಹಸ ಕೀಡ್ರೆ, ಬೊಟಿಂಗ್ , ಹಟ್ ಹೌಸ್ ಸಹಿತ ಹಲವು ಸೌಲಭ್ಯ ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಸಿಗಲಿದೆ ಎಂದರು.

Related Posts

Leave a Reply

Your email address will not be published.