HomeFresh Newsಪ್ಯಾರಿಸ್ ಒಲಿಂಪಿಕ್‌: ಬಾಕ್ಸಿಂಗ್  ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ

ಪ್ಯಾರಿಸ್ ಒಲಿಂಪಿಕ್: ಬಾಕ್ಸಿಂಗ್  ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್ಫೈನಲ್ಗೆ

ಪ್ಯಾರಿಸ್ ಒಲಿಂಪಿಕ್‌ ಕ್ರೀಡಾಕೂಟದ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಭಾರತದ ಬಾಕ್ಸರ್ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಶನಿವಾರ ರಾತ್ರಿ ನಡೆದ ಪೈಪೋಟಿಯಲ್ಲಿ ವಿಯೆಟ್ನಾಂನ ವೋ ಥಿ ಕಿಮ್ ಅನ್ಹ್ ಎದುರು ಪ್ರಾಬಲ್ಯ ಮೆರೆದ ಪ್ರೀತಿ,  5–0 ಅಂತರದ ಗೆಲುವು ಸಾಧಿಸಿದ್ದಾರೆ.ಏಷಿಯನ್‌ ಗೇಮ್ಸ್‌ ಕಂಚಿನ ಪದಕ ವಿಚೇತೆ ಪ್ರೀತಿ ಅವರಿಗೆ ಇದು ಚೊಚ್ಚಲ ಒಲಿಂಪಿಕ್ ಸ್ಪರ್ಧೆಯಾಗಿದೆ. ಹರಿಯಾಣದ 20 ವರ್ಷದ ಈ ಬಾಕ್ಸರ್‌, ಕ್ರೀಡಾಕೂಟಕ್ಕೆ ಕೆಲವು ದಿನಗಳ ಮೊದಲು ಅನಾರೋಗ್ಯಕ್ಕೆ ತುತ್ತಾಗಿದ್ದರು.ಪ್ರೀತಿ ಅವರು ಮಂಗಳವಾರ ನಡೆಯುವ 16ನೇ ಸುತ್ತಿನ ಪಂದ್ಯದಲ್ಲಿ ಕೊಲಂಬಿಯಾದ ಮಾರ್ಕೆಲಾ ಯೆನಿ ವಿರುದ್ಧ ಸೆಣಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments