HomeFresh Newsಪ್ಯಾರಿಸ್ ಒಲಿಂಪಿಕ್ಸ್ : ಶೂಟರ್ ಮನು ಭಾಕರ್‌ಗೆ ಕಂಚು

ಪ್ಯಾರಿಸ್ ಒಲಿಂಪಿಕ್ಸ್ : ಶೂಟರ್ ಮನು ಭಾಕರ್‌ಗೆ ಕಂಚು

ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 221.7 ಪಾಯಿಂಟ್‌ಗಳನ್ನು ಸಂಪಾಧಿಸಿದ ಮನು ಭಾಕರ್ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಮುತ್ತಿಕ್ಕಿದರೆ, ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಮುತ್ತಿಟ್ಟರು. ಉಳಿದಂತೆ 241.3 ಅಂಕ ಗಳಿಸಿದ ಕೊರಿಯಾದ ಮತ್ತೊಬ್ಬ ಸ್ಪರ್ಧಿ ಕೊರಿಯಾದ ಕಿಮ್ ಯೆಜಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments