ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದ್ದು ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ಭಾನುವಾರ ರಾತ್ರಿ ವೇಳೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ. ನಂದಾವರದ ಮನೆಯೊಂದರ ಮುಂಭಾಗ ಅಪಾರ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

Related Posts

Leave a Reply

Your email address will not be published.