ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ. ಇನ್ನು ಕೆಲದಿನಗಳ ಹಿಂದೆಯಷ್ಟೇ ದೇಶದಲ್ಲಿ ಪಿಎಫ್ ಐ ನಿಷೇಧ ಮಾಡಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಪಿಎಫ್ ಐ ವಿರುದ್ಧ ರಾಜ್ಯದ ಪೊಲೀಸರು ಮತ್ತೆ ಕಾರ್ಯಚಾರಣೆ ನಡೆಸಿದ್ದಾರೆ.

Related Posts

Leave a Reply

Your email address will not be published.