ಪಿಎಫ್‍ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ : ಅಮಿತ್ ಷಾ
ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಸಾಮಾಜಿಕ ನ್ಯಾಯದಲ್ಲಿ ಗುರುತರವಾದ ಗುರುಗಳಾಗಿ ಧರ್ಮರಕ್ಷಣೆಯನ್ನು ಮಾಡಿದವರು ನಾರಾಯಣಗುರುಗಳು. ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪಿ ಎಫ್ ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ. ಎಂದರು.
ಜಿಲ್ಲಾ ಸಮಿತಿಯ ಪರವಾಗಿ ಅಮಿತ್ ಷಾ ಅವರಿಗೆ ನಾರಾಯಣಗುರುಗಳ ಮೂರ್ತಿಯನ್ನು ನೀಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀಧರ ಪೂಜಾರಿ ಅಮಿತ್ ಷಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಚುನಾವಣಾ ಪ್ರಭಾರಿ ವಿಜೇಂದ್ರ ಗುಪ್ತ, ಶಾಸಕ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಬಿಜೆಪಿ ಅಭ್ಯರ್ಥಿಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮೋದ್ ಮಧ್ವರಾಜ್, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ದಿನಕರ ಬಾಬು, ಶ್ರೀಶ ನಾಯಕ್, ವೀಣಾ ಎಸ್ ಶೆಟ್ಟಿ, ಸುಲೋಚನಾ ಭಟ್, ನಯನ ಗಣೇಶ್, ಉದಯಕುಮಾರ್ ಶೆಟ್ಟಿ, ನವೀನ್ ಕುತ್ಯಾರು, ಪ್ರತಾಪ್ ಸಿಂಹ ಮತ್ತಿತರರು ಉಪಸ್ಥಿತರಿದ್ದರು.