ಇನ್ನು 5 ವರ್ಷ PFI ಬ್ಯಾನ್

ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಹೇಳಿದೆ.ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ದೇಶದ ವಿವಿಧ ಭಾಗದಲ್ಲಿ 250 ಕ್ಕೂ ಅಧಿಕ ಪಿಎಫ್ ಐ ನಾಯಕರ ಬಂಧನವಾಗಿತ್ತು.

Related Posts

Leave a Reply

Your email address will not be published.