ಪ್ರಧಾನಿ ನರೇಂದ್ರ ಮೋದಿ ತವರೂರಿಗೆ ದ.ಕ ಜಿಲ್ಲೆಯ ಜೇನು ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100 ಜೇನು ಕುಟುಂಬಗಳನ್ನು ಗುಜರಾತ್‍ಗೆ ರವಾನಿಸಿರುವ ಇವರಿಗೆ ಒಟ್ಟು 1 ಸಾವಿರ ಜೇನು ಕುಟುಂಬಗಳನ್ನು ಗುಜರಾತ್ ನಲ್ಲಿ ಬೆಳೆಸುವ ಜವಾಬ್ದಾರಿಯನ್ನು ನೀಡಲಾಗಿದೆ.

ಹೌದು ಜೇನು ಕೃಷಿಯಲ್ಲಿ ಅಪ್ರತಿಮ ಸಾಧನೆ ತೋರುತ್ತಿರುವ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯ ಯುವಕ ಮನಮೋಹನ್ ಆರಂಬ್ಯ ತುಡುವೆ ಜೇನಿನ ಸಿಹಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಲ್ಲಿ ಹೆಜ್ಜೆ ಇರಿಸಿದ್ದು ಗುಜರಾತ್‍ನಲ್ಲಿಯು ಇವರ ಜೇನು ಕೃಷಿಗೆ ಬೇಡಿಕೆ ವ್ಯಕ್ತವಾಗಿದೆ. ಜೇನು ಕೃಷಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ರಾಜ್ಯದ ಜೇನು ಉತ್ಪಾದನೆಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ಇರುವ ಇವರು ರಾಜ್ಯದಾದ್ಯಂತ ಜೇನು ಮತ್ತು ಕುಟುಂಬಗಳನ್ನ ಒದಗಿಸಿಕೊಟ್ಟು ಜೇನು ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ. ಜೇನು ಕೃಷಿಯಲ್ಲಿನ ಇವರ ಸಾಧನೆ ಮತ್ತು ಯಶಸ್ಸನ್ನು ಗುರುತಿಸಿಕೊಂಡ ಗುಜರಾತ್ ನ ಕೃಷಿಕರಿಂದ
1000 ಪೆಟ್ಟಿಗೆಗೆ ಬೇಡಿಕೆ ಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ಆಗಿರುವ ಮಧು ಕ್ರಾಂತಿಯ ಕಲ್ಪನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಯೋಗಾತ್ಮಕ ವಾಗಿ ಮನಮೋಹನ್ ಅವರು ಗುಜರಾತ್‍ಗೆ 100 ಜೇನು ಕುಟುಂಬಗಳನ್ನು ಕಳುಹಿಸಿದ್ದಾರೆ. ಈಗಾಗಲೇ 1000 ಜೇನು ಕುಟುಂಬದ ಪೆಟ್ಟಿಗೆಗೆ ಬೇಡಿಕೆ ವ್ಯಕ್ತವಾಗಿದೆ. ಈ ಮೂಲಕ ರಾಜ್ಯದಾದ್ಯಂತ ಜೇನು ಕೃಷಿಯಲ್ಲಿ ಹೆಸರುವಾಸಿಯಾಗಿರುವ ಮನಮೋಹನ್ ರಾಷ್ಟ್ರದಾದ್ಯಂತ ತುಡುವೆ ಜೇನಿನ ಸಿಹಿ ಹಂಚಲು ಹೊರಟಿದ್ದಾರೆ.

ಕೇರಳ, ಕರ್ನಾಟಕ ರಾಜ್ಯದ ದಕ್ಷಿಣಕನ್ನಡ, ಕೊಡಗು, ಚಿತ್ರದುರ್ಗ ಹೀಗೆ ನಾನಾ ಕಡೆಗಳಲ್ಲಿ ಮನಮೋಹನ ಅವರ ಜೇನಿನ ಪೆಟ್ಟಿಗೆ ಇದೆ. ಜೇನು ಕೃಷಿಯಲ್ಲೇ ಸುಮಾರು 20 ಜನರಿಗೆ ನೇರ ಉದ್ಯೋಗ ನೀಡುತ್ತಿರುವ ಮನಮೋಹನ್ ಜೇನಿನ ಕೃಷಿ ತನ್ನ ಅಗಾಧ ಅನುಭವವನ್ನು ಜೇನು ಸಾಕಾಣಿಕೆಗಾಗಿ ತಮ್ಮ ಬಳಿ ಬರುವವರಿಗೆಲ್ಲಾ ಧಾರೆ ಎರೆದಿದ್ದಾರೆ.

Related Posts

Leave a Reply

Your email address will not be published.