ಮಂಗಳೂರು-ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ
ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು.
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.5ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳು ಈ ರೈಲು ಸಂಚರಿಸಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು, ರೈಲ್ವೇ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು, ರೈಲ್ವೇ ಹೋರಾಟಗಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.