HomeFresh Newsಮಂಗಳೂರು : ಪ್ರಧಾನಿ ಮೋದಿ ಆಗಮನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಮಂಗಳೂರು : ಪ್ರಧಾನಿ ಮೋದಿ ಆಗಮನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದರು.

ಇನ್ನು ನಗರ ಪೋಲಿಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‍ಗಳಲ್ಲಿ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‍ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗುತ್ತದೆ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಗ್ಗೆ 2 ಪ್ರಕರಣ ದಾಖಲಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments