ನವದೆಹಲಿ : ಹೊಸ ವರುಷದ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ‘ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ. ಹೊಸ ಗುರಿ ಮತ್ತು ಉದ್ದೇಶಗಳೊಂದಿಗೆ ಮುನ್ನಡೆಯಲು ಹೊಸವರ್ಷ ಬರುತ್ತಿದೆ’ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ. ‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಹರ್ಷೋದ್ಗಾರ, ಪರಸ್ಪರ ಶುಭಾಶಯ ವಿನಿಮಯ, ಪಟಾಕಿಗಳ ಚಿತ್ತಾರಗಳೊಂದಿಗೆ ಜನರು ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.