HomeFresh Newsಪಡುಬಿದ್ರಿಯಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ ಸಭೆ

ಪಡುಬಿದ್ರಿಯಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ ಸಭೆ

ಪಡುಬಿದ್ರಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾ ಸೇವೆ ಆಂದೋಲನ’ ಸಭೆಯು ಸೆಪ್ಟೆಂಬರ್ 26ರಂದು ಮಧ್ಯಾಹ್ನ 3 ಗಂಟೆಗೆ ಪಡುಬಿದ್ರಿ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾಪು ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಡುಬಿದ್ರಿ ಗ್ರಾಮ ಪಂಚಾಯತ್ ಮನವಿ ಮಾಡಿದೆ.


ಸಾರ್ವಜನಿಕರು ತಮ್ಮ ಸಮಸ್ಯೆ, ಬೇಡಿಕೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯತ್ ಕಚೇರಿಯಿಂದ ಪಡೆದುಕೊಳ್ಳಬಹುದು ಅಥವಾ ಸ್ವತಃ ಪ್ರಿಂಟ್ ತೆಗೆದುಕೊಂಡು ಅರ್ಜಿ ಸಲ್ಲಿಸಬಹುದು.
ಮಾಜಿ ಜನಪ್ರತಿನಿಧಿಗಳು ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಸಭೆಯಲ್ಲಿ ಸ್ವತಃ ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಶೆಟ್ಟಿ ಮನವಿ ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳ: ಪಡುಬಿದ್ರಿ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣ
ದಿನಾಂಕ: ಸೆಪ್ಟೆಂಬರ್ 26, 2026
ಸಮಯ: ಮಧ್ಯಾಹ್ನ 3:00 ಗಂಟೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments