ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಎರಡನೆಯ ಅತ್ಯಾಚಾರ ಪ್ರಕರಣದಲ್ಲಿ ಮಾಜೀ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು.

ಪ್ರಜ್ವಲ್ ರೇವಣ್ಣ ಮೇಲೆ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲ ಅತ್ಯಾಚಾರ ಪ್ರಕರಣ ಮತ್ತು ಒಟ್ಟು ಅಸಹ್ಯ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿ ಇದ್ದಾರೆ. ಎರಡನೆಯ ಪ್ರಕರಣ ಸಂಬಂಧ ವಿಚಾರಣೆಗೆ ಕರೆತರಲಾಗಿತ್ತು. ಮ್ಯಾಜಿಸ್ಟ್ರೇಟ್ ಕೆ. ಎನ್. ಶಿವಕುಮಾರ್ ಅವರು 14 ದಿನದ ನ್ಯಾಯಾಂಗ ಬಂಧನ ಪ್ರಕಟಿಸಿದರು. ಮತ್ತೆ ಪ್ರಜ್ವಲ್‌ರನ್ನು ಪರಪ್ಪನ ಅಗ್ರಹಾರ ಸೆರೆಮನೆಗೆ ತಳ್ಳಲಾಯಿತು.

add - tandoor .

Related Posts

Leave a Reply

Your email address will not be published.