ಪ್ರವೀಣ್ ಹತ್ಯೆ ಮೂವರು ಹಂತಕರು ಪೊಲೀಸ್ ಬಲೆಗೆ ?
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಲ್ಲಿ ಭಾಗಿಯಾದ ಮೂವರು ಹಂತಕರನ್ನು ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಜು 26 ರಂದು ಸಂಜೆ ಬೆಳ್ಳಾರೆಯ ಮಾಸ್ತಿ ಕಟ್ಟೆ ಬಳಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರನ್ನು ಕಡಿದು ಕೊಲೆ ಮಾಡಿದ್ದರು. ಈ ಬಗ್ಗೆ ಈಗಾಗಾಲೇ ಒಟ್ಟು 7 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದರು . ಆದರೇ ಹತ್ಯೆಯ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದು ಪೊಲೀಸರಿಗೆ ದೊಡ್ಡ ತಲೆ ನೋವಾಗಿತ್ತು.
ಆದರೇ ಇದೀಗ ಮೂವರು ಪ್ರಮುಖ ಆರೋಪಿಗಳನ್ನು ಬುಧವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ ಶಂಕಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಇದೇ ಹಿನ್ನಲೆಯಲ್ಲಿ ಮಧ್ಯಾಹ್ನ 12.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆಯವರು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಟಿ ಕರೆದಿದ್ದು ಅದರಲ್ಲಿ ಹತ್ಯೆ ಸಂಚಿನ ಸಂಪೂರ್ಣ ವಿವರ, ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ವಿವರ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.