ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಬೆಳ್ಳಂಬೆಳಗ್ಗೆ ಸುಳ್ಯ, ಪುತ್ತೂರಿನ 32 ಸ್ಥಳಗಳಿಗೆ ಎನ್. ಐ. ಎ. ದಾಳಿ.
RELATED ARTICLES
