ಪ್ರವೀಣ್ ನೆಟ್ಟಾರು ಕೊಲೆ : ಇಬ್ಬರ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದಾರೆ. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹಾಗೂ ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
