ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ.
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಿಗು ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ