ಪ್ರವೀಣ್ ನೆಟ್ಟಾರು ಕೊಲೆ : ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ
ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಆ.11ರ ತನಕ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದು,ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ ಬಂಧನಕ್ಕೊಳಗಾದವರು. ಆರೋಪಿಗಳಾದ ಝಾಕೀರ್ ಮತ್ತು ಶಫೀಕ್ನನ್ನು ಬೆಳ್ಳಾರೆ ಠಾಣೆಯ ಪೋಲೀಸರು ಗುರುವಾರ ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾಪಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶ ಗೌಡ.ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿ ಕಲಂ 302 ಅಡಿಯಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ನ್ಯಾಯಾಲಯ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಪೋಲೀಸರು ಮತ್ತೆ ಆರೋಪಿಗಳನ್ನುಪೋಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ತಿಳಿಸಿದ್ದಾರೆ.