HomeFresh Newsಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ

ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್.ರೈ ಕೋಡಿಂಬಾಡಿ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments