HomeFresh Newsಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಅನೌನ್ಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಎನ್‍ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‍ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿದ್ದಾರೆ. ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿದ್ದಾರೆಂದು ತಿಳಿದುಬಂದಿದೆ.

ಎನ್‍ಐಏ ಅಧಿಕಾರಿಗಳು ಈ ಹಿಂದೆ ಆರೋಪಿಗಳ ಪೋಟೊಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಆರೋಪಿಗಳ ಪತ್ತೆಗೆ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದುಹೋಗಿದ್ದು ಎನ್‍ಐಎ ಅಧಿಕಾರಿಗಳ ಶೋಧ ಕಾರ್ಯಾಚರಣೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments