HomeFresh Newsರೋಟರಿ ಆಂಗ್ಲ ಮಾಧ್ಯಮ ಶಾಲೆ,ಕಿನ್ನಿಗೋಳಿ ಆಶ್ರಯದಲ್ಲಿ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು...

ರೋಟರಿ ಆಂಗ್ಲ ಮಾಧ್ಯಮ ಶಾಲೆ,ಕಿನ್ನಿಗೋಳಿ ಆಶ್ರಯದಲ್ಲಿ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ–2026 ಪೂರ್ವಭಾವಿ ಸಭೆ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಕಿನ್ನಿಗೋಳಿ ಇವರ ಸಹಯೋಗದಲ್ಲಿ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ–2026 ರ ಸಿದ್ಧತೆ ಹಾಗೂ ವ್ಯವಸ್ಥೆಗಳ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ರೋಟರಿ ಆಂಗ್ಲ ಮಾಧ್ಯಮ ಶಾಲೆ, ಕಿನ್ನಿಗೋಳಿಯಲ್ಲಿ ನೆರವೇರಿಸಲಾಯಿತು.

ಕ್ರೀಡಾಕೂಟವನ್ನು 9 ಮತ್ತು 10 ಅಕ್ಟೋಬರ್ 2026 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ನೆರವೇರಿಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು.

ಕ್ರೀಡಾಕೂಟದಲ್ಲಿ ನಡೆಯಲಿರುವ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳು, ಮೈದಾನದ ಸಿದ್ಧತೆ, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳು, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು, ಕ್ರೀಡಾಕೂಟದ ವಿವಿಧ ಜವಾಬ್ದಾರಿಗಳು ಹಾಗೂ ಅಗತ್ಯ ವ್ಯವಸ್ಥೆಗಳ ಕುರಿತು ಸವಿವರವಾಗಿ ಈ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಜೀವನ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ನಿತಿನ್ ಪುತ್ರನ್, ಕಾರ್ಯದರ್ಶಿ ಶ್ರೀ ಸಂತೋಷ್ ಕುಮಾರ್ ಕಟೀಲ್, ಖಜಾಂಚಿ ಶ್ರೀ ಚೇತನ್ ಕುಮಾರ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ರೋಟೇರಿಯನ್ ಶರತ್ ಶೆಟ್ಟಿ, ಸಹಕಾರ್ಯದರ್ಶಿ ಶ್ರೀ ಸ್ವರಾಜ್ ಶೆಟ್ಟಿ, ಖಜಾಂಚಿ ಶ್ರೀ ದೇವದಾಸ್ ಶೆಟ್ಟಿ, ಪ್ರಥಮ ದರ್ಜೆ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಚೆಲುವಮ್ಮ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿಂಧ್ಯಾ ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಶರತ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರ ಸಹಕಾರದ ಅಗತ್ಯವನ್ನು ವಿವರಿಸಿದರು.ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಜೀವನ್ ಶೆಟ್ಟಿಯವರು ಮಾತನಾಡಿ ಕ್ರೀಡಾ ಕೂಟದ ರೂಪುರೇಷೆಗಳನ್ನು ವಿವರಿಸಿ ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಗುರುರಾಜ್ ರವರು ಸಭೆಗೆ ಆಗಮಿಸಿದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments