HomeFresh Newsಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ: ನವೀನ್ ಸುವರ್ಣರಿಗೆ ಪ್ರೆಸ್ ಕ್ಲಬ್ ಗೌರವ

ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ: ನವೀನ್ ಸುವರ್ಣರಿಗೆ ಪ್ರೆಸ್ ಕ್ಲಬ್ ಗೌರವ

ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್‌ಕ್ಲಬ್, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಜುಲೈ- 1ರಂದು ಮಧ್ಯಾಹ್ನ 3.00 ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ.

ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಉಮಾನಾಥ ಎ. ಕೋಟ್ಯಾನ್ ಕಾಯ೯ಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಗೌರವ : ಟಿವಿ9 ಮಡಿಕೇರಿ ವಿಡಿಯೋ ಜರ್ನಲಿಸ್ಟ್ ನವೀನ್ ಸುವರ್ಣರಿಗೆ ಪ್ರೆಸ್ ಕ್ಲಬ್ ಗೌರವ ಪ್ರದಾನ ಮಾಡಲಾಗುವುದು.
ಪಿಯುಸಿ ಸಾಧಕ ಸನ್ಮತ್ ಎಸ್. ಆಚಾರ್ಯ, ಎಸ್‌ಎಸ್‌ಎಲ್‌ಸಿ ಸಾಧಕ ಅಮೋಫ್ ಹೆಗ್ಡೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸವನ್ನು ಎಐ, ಸೈಬರ್ ಭದ್ರತಾ ತಜ್ಞ, ಲೇಖಕ ಡಾ. ಅನಂತ್ ಪ್ರಭು ಜಿ. ನೆರವೇರಿಸಲಿದ್ದು, ‘ಎಐ ಮೂಲಕ ಪತ್ರಕರ್ತರಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments