ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಜುಲೈ 3ರಂದು ಮಧ್ಯಾಹ್ನ 2.30ಕ್ಕೆ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಹಿರಿಯ ಜಾನಪದ ಚಿಂತಕ ಡಾ. ವೈ. ಎನ್. ಶೆಟ್ಟಿ ಅವರು ದತ್ತಿನಿಧಿ ವಿತರಿಸಿ, ದತ್ತಿ ಉಪನ್ಯಾಸ ನೀಡಲಿದ್ದಾರೆ. ವಿಜಯಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಜಾನ್ ಡಿಸೋಜ ಕುಂದಾಪುರ ಅವರು “ಪತ್ರಿಕೋದ್ಯಮ ಮತ್ತು ವಿದ್ಯಾರ್ಥಿಗಳ ಪಾತ್ರ” ಕುರಿತು ಉಪನ್ಯಾಸ ನೀಡಲಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಆಸ್ಟ್ರೋ ಮೋಹನ್ ಹಾಗೂ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


