ಮಂಗಳೂರು : ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಪತ್ರಿಕೆ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಅವರು ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ಮಂಗಳೂರ ಸಮಾಚಾರ’ ಪತ್ರಿಕೆಯ ಸಂಪಾದಕ ಡಾ.ಹರ್ಮನ್ ಮೋಗ್ಲಿಂಗ್ ರವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಅವರು ಮಾತನಾಡಿದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮೋಗ್ಲಿಂಗ್ ಅವರು ಜೈಮಿನಿ ಭಾರತ, ಬಸವ ಪುರಾಣ, ದಾಸ ಸಾಹಿತ್ಯವನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಮಾಧ್ಯಮ ಕ್ಷೇತ್ರದ ಜೊತೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿದವರು ಎಂದು ಹೇಳಿದರು.

ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ.ಎಚ್.ಎಂ.ವಾಟ್ಸನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಪಿ.ಬಿ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಮಾತನಾಡಿದರು.

ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಪುಣಚ, ಕೋಶಾಧಿಕಾರಿ ಕೆನ್ಯೂಟ್ ಪಿಂಟೋ, ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪತ್ರಕರ್ತರಾದ ಡೊನಾಲ್ಡ್ ಪಿರೇರಾ, ಎಡ್ವರ್ಡ್ ಲೋಬೋ, ಶಾರುಖ್, ಹಮೀದ್ ವಿಟ್ಲ ಸೇರಿದಂತೆ ಥಿಯೋಲೋಜಿಕಲ್ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಈಶ್ವರ ವಾರಣಾಶಿ ಸ್ವಾಗತಿಸಿ, ವಂದಿಸಿದರು.

