ನ. 28 : ಪ್ರಧಾನಿ ಮೋದಿ ಉಡುಪಿ ಮಠಕ್ಕೆ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.


















