HomeFresh Newsಮೆಟ್ರೊ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ಮೆಟ್ರೊ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್‌ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್‌.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರೂ ಇದ್ದರು.

ಹಳದಿ ಮಾರ್ಗವು ಒಟ್ಟು 19.15 ಕಿ.ಮೀ. ಉದ್ದವಿದೆ. ಇದರೊಂದಿಗೆ, ನಗರದಲ್ಲಿ 76.95 ಕಿ.ಮೀ. ಇದ್ದ ‘ನಮ್ಮ ಮೆಟ್ರೊ’ ಜಾಲ 96 ಕಿ.ಮೀ.ಗೆ ವಿಸ್ತರಣೆಗೊಂಡಂತಾಗಿದೆ. ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿದ್ದು, ಮೂರು ರೈಲುಗಳು ನಿತ್ಯ ಸಂಚರಿಸಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments