ನ. 28 ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ :ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 24-11-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.