ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕಎಸ್ ಎಮ್ ರಾಮ್ ಪ್ರಸಾದ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು.
ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್ ನಾಯಕ್, ಮತ್ತು ಲೆಕ್ಕ ಪರಿಶೋಧಕರಾದ ಮುರಳಿಧರ್, ಸುರೇಶ್ ಜೊತೆಗಿದ್ದರು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಮತ್ತು ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಉಪಸ್ಥಿತರಿದ್ದರು.