ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರಿನ ಚಿಲಿಂಬಿ ಸಮೀಪ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದುರೈ ಅವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.


ಮಾಜಿ ಸಚಿವ ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ಕಾರು ಜಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಸಹಿತ ಹಲವರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ, ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.


