HomeFresh Newsಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ; KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಜೊತೆ...

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ; KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಜೊತೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಹತ್ವದ ಚರ್ಚೆ

ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.
ವೆಂಕಟೇಶ್ ಪ್ರಸಾದ್ ರವರು ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಆಸಕ್ತರಗಿದ್ದು ಸೂಕ್ತ ಸ್ಥಳವನ್ನು ನಿಗದಿಪಡಿಸಲು ಅತೀ ಶೀಘ್ರದಲ್ಲಿ ಮಂಗಳೂರಿಗೆ ಭೇಟಿ ನೀಡುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು, ಮಂಗಳೂರಿನಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು ಟಿ ಖಾದರ್ ರವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಯೋಜನೆ ಬಗ್ಗೆ ಚರ್ಚಿಸುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಎಲ್ಲಾ ರೀತಿಯ ಸಂಪರ್ಕ ಜಾಲ ಹೊಂದಿದ್ದು ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಅನ್ನು ನಿರ್ಮಿಸಲು ಮಂಗಳೂರು ಸೂಕ್ತ ಸ್ಥಳವಾಗಿದ್ದು ಇದರ ಪ್ರಯೋಜನವನ್ನು ಪಡೆಯಲು KSCA ಮುಂದಾಗಿದ್ದು ಕೂಡಲೇ ಕಾರ್ಯರೂಪಕ್ಕೆ ತರುವ ಸಕಲ ಪ್ರಯತ್ನ ಮಾಡುವುದಾಗಿ ತಿಳಿಸಿದರು ಹಾಗೂ ಇದಕ್ಕೆ ಬೇಕಾಗುವ ಎರಡು ಸ್ಥಳವನ್ನು ಈಗಾಗಲೇ ಗುರುತಿಸಲಾಗಿದ್ದು ಸ್ಥಳ ಪರೀಕ್ಷಿಸಲು ಆಗಮಿಸುವಂತೆ ಮೂಡ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು KSCA ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್ ರವನ್ನು ವಿನಂತಿಸಿಕೊಂಡರು.


ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡಲ್ಲಿ ಕರಾವಳಿ ಭಾಗದ ಕ್ರೀಡಾಪಟುಗಳಿಗೆ ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ನಗರದ ಕ್ರೀಡಾ ಮೂಲಸೌಕರ್ಯಕ್ಕೆ ಹಾಗೂ ಪ್ರವಾಸೋದ್ಯಮಕ್ಕೆ ಮತ್ತಷ್ಟು ಬಲ ಬರಲಿದೆ.
ಈ ಚರ್ಚೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಖಜಾಂಚಿಗಳಾದ ಬಿ ಏನ್ ಮಧುಕರ್, ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಪರಿಣಿತ ಹಾಗೂ ಸದಸ್ಯರಾದ ಅನುಪ್ ಶ್ರೀಧರ್ ಮುಂತಾದವರು ಪಾಲ್ಗೊಂಡರು..

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments