ಮಂಗಳೂರು: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿರುವುದಕ್ಕೆ ಖಂಡನೆ: ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.
ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ ಅವರು ಬಿಜೆಪಿ ಅಸ್ಸಾಂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಎಲ್ಲಾರನ್ನು ಒಗ್ಗೊಡಿಸುವ ಕೆಲಸವನ್ನು ರಾಹುಲ್ ಗಾಂಧಿ ಮುಖಾಂತರ ಭಾರತ್ ಜೋಡೊ ನ್ಯಾಯ ಯಾತ್ರೆ ಮೂಲಕ ನಡೆಯುತ್ತಿದೆ.ಬಿಜೆಪಿ ವಿರೋಧಿಸುವ ಮೂಲಕ ಹಿಟ್ಲರ್ ಧೋರಣೆಯನ್ನ ಅನುಸರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಬೇಬಿಕುಂದರ್, ರಕ್ಷಿತ್ ಶಿವರಾವ್,ಸುರೇಂದ್ರ ಕಂಬಳಿ,ಶಾಹುಲ್ ಹಮೀದ್, ಲಕ್ಮುನ್ ಬಂಟ್ವಾಳ, ಶಾಲೆಟ್ ಪಿಂಟೋ , ಮೋಹನ್ ಕೋಟ್ಯಾನ್, ನಾಗೇಶ್ ಬೆಳ್ತಂಗಡಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.